X Close
X
9846067672

ಅಲಹಾಬಾದ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳು


ಉತ್ತರ ಪ್ರದೇಶದ ಅಲಹಾಬಾದ್‍ನ ಜಾನ್ಸಿ ತ್ರಿವೇಣಿಪುರಂನಲ್ಲಿ ಇಂದು ಬೆಳಗ್ಗೆ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಭಗ್ನಗೊಳಿಸಿದ್ದಾರೆ.

ಪುತ್ಥಳಿಯ ಶಿರವನ್ನು ಕೆಳಗೆ ಉರುಳಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಗಣ್ಯಾತಿಗಣ್ಯರ ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದರೂ ಕಿಡಿಗೇಡಿಗಳಿಂದ ಪುತ್ಥಳಿಗಳ ಧ್ವಂಸ ಕುಕೃತ್ಯಗಳು ಮುಂದುವರಿದಿದೆ.  

ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಘಟನೆ ನಂತರ ಅಲ್ಲಿ ಕೆಲಕಾಲ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣಗೊಂಡಿತ್ತು.