X Close
X
9846067672

ಅಹಮದಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ


ಅಹಮದಾಬಾದ್‍ನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ಸಂಸ್ಥೆಯ ವಿಮಾನದ ಎಂಜಿನ್‍ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ.   

ಅಹಮದಾಬಾದ್‍ನಿಂದ ನಿನ್ನೆ ರಾತ್ರಿ 8.40ರಲ್ಲಿ ಮೇಲೇರಿದ ವಿಸ್ತಾರ ಯುಕೆ-99 ವಿಮಾನವು 1,000 ಮೀಟರ್ ಎತ್ತರದಲ್ಲಿ ಹಾರುತ್ತಿದ್ಧಾಗ ಬಲಭಾಗದ ಎಂಜಿನ್‍ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನ ಚಾಲಕ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಇನ್ನು ವಿಮಾನ ಹಾರಾಟ ಮಾಡುತ್ತಿರುವಾಗಲೇ ಎಂಜಿನ್‍ಗಳು ಕೈಕೊಡುತ್ತಿರುವ ಅಪಾಯಕಾರಿ ಸನ್ನಿವೇಶ ಮತ್ತೆ ಮರುಕಳಿಸಿದೆ.